ಹುಬ್ಬಳ್ಳಿಯಿಂದ ಮಂಗಳೂರಿಗೆ ಬರುತ್ತಿದ್ದ ಸರಕು ಲಾರಿಯಲ್ಲಿ ಬೆಂಕಿ: ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡ ಚಾಲಕ
ಉತ್ತರ ಕನ್ನಡ: ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ಸರಕು ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ.
ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರು ತೆರಳುತ್ತಿದ್ದ ಲಾರಿಗೆ ಏಕಾಏಕಿ ಬೆಂಕಿ ತಗುಲಿದ್ದು, ತಕ್ಷಣ ಲಾರಿಯಿಂದ ಜಿಗಿದು ಚಾಲಕ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.
ಬೆಂಕಿಯ ತೀವ್ರತೆಗೆ ಲಾರಿ ಸ್ಥಳದಲ್ಲೇ ಸಂಪೂರ್ಣ ಭಸ್ಮಗೊಂಡಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದು ಬೆಂಕಿ ನಂದಿಸಿದ್ದಾರೆ.
ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.





