March 19, 2026

ಶಿರ್ವ: ಕಾರು ಮತ್ತು ಟೆಂಪೋ ನಡುವೆ ರಸ್ತೆ ಅಪಘಾತ: ಕಾರಿನಲ್ಲಿದ್ದ ಮಹಿಳೆ, ಯುವಕ ಮೃತ್ಯು

0
IMG-20221224-WA0059.jpg

ಶಿರ್ವ: ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ಕಾರು ಮತ್ತು ಟೆಂಪೋ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿರುವ ಅವಘಡ ಶನಿವಾರ ಸಂಜೆ ನಡೆದಿದೆ.

ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಸಿಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

ಮೂಡಬಿದಿರೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರಿಗೆ ಕಟಪಾಡಿಯಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಟೆಂಪೋ ಮುಖಾಮುಖಿಯಾಗಿ ಅವಘಡ ಸಂಭವಿಸಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿತ್ತು. ಉಡುಪಿಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದ್ದು, ಮೃತರ ಸ್ಪಷ್ಟ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ.

ಸ್ಥಳದಲ್ಲಿ ದೊರೆತ ಲೈಸೆನ್ಸ್ ಪ್ರಕಾರ ಬೆಂಗಳೂರಿನ ಪವನ್ ಬಿ. ಎಸ್ (27) ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!