March 19, 2026

ಸುರತ್ಕಲ್: ದುಷ್ಕರ್ಮಿಗಳ ತಂಡದಿಂದ ವ್ಯಕ್ತಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು

0
IMG-20221224-WA0068.jpg

ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.

ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಜಲೀಲ್ ಅವರ ಮೇಲೆ ಇಬ್ಬರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದೆ ಎಂದು ವರದಿಯಾಗಿದೆ.

ಇನ್ನು ಘಟನೆಯ ವೇಳೆ ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮಂಗಳೂರು ಪೊಲೀಸರು ನೀಡಬೇಕಷ್ಟೇ.

Leave a Reply

Your email address will not be published. Required fields are marked *

error: Content is protected !!