ಸುರತ್ಕಲ್: ಚೂರಿ ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಸುರತ್ಕಲ್: ಯುವಕನೊಬ್ಬನಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ಶನಿವಾರ(ಡಿ.24) ಸಂಜೆ ಸುರತ್ಕಲ್ ಸಮೀಪದ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ.
ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.




