ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ
ಹಾವೇರಿ: ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು.
ಈ ಕುರಿತು ಮಾತನಾಡಿದ ಅವರು, ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇನ್ನು ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉತ್ತರಿಸುತ್ತಾ, ಐಎಲ್ ಐ ಮತ್ತು ಸಾರಿಗಳ ಪರೀಕ್ಷೆ ಹೆಚ್ಚಿಸಲಾಗುವುದು ಹಾಗೂ ಬೂಸ್ಟರ್ ಡೋಸ್ ಗಳನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್ ಗಳು ಸೇರಿದಂತೆ ಮೂಲಭೂತಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ದಪಡಿಸಿಕೊಳ್ಳುವುದು. ಮಾಸ್ಕ್ ಗಳನ್ನು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್ ಪೋರ್ಟ್, ಮತ್ತು ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.




