February 4, 2026

ನಟಿ ತುನಿಷಾ ಶರ್ಮಾ ಆತ್ಮಹತ್ಯೆ: ಸಹನಟ ಶಿಜಾನ್‌ ಖಾನ್‌ ಅರೆಸ್ಟ್

0
ms-21212-shahij.jpg

ಮುಂಬೈ: ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಹನಟ ಶಿಜಾನ್‌ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತುನಿಷಾ ಅವರ ತಾಯಿ ದೂರು ನೀಡಿದ್ದರು.

ದೂರಿನ ಅನ್ವಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಶಿಜಾನ್‌ನನ್ನು ವಶಕ್ಕೆ ಪಡೆಯಲಾಗಿದೆ ಆರೋಪಿ ಶಿಜಾನ್‌ ಖಾನ್‌ ವಿರುದ್ಧ ಐಪಿಸಿ ಸೆಕ್ಷನ್ 306 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸಿಪಿ ಚಂದ್ರಕಾಂತ ಜಾಧವ್ ತಿಳಿಸಿದ್ದಾರೆ.

ಪಾಲ್ಘರ್‌ ಜಿಲ್ಲೆಯ ವಸಾಯಿ ಪ್ರದೇಶದಲ್ಲಿ ಹಾಕಲಾಗಿದ್ದ ಧಾರಾವಾಹಿವೊಂದರ ಶೂಟಿಂಗ್‌ ಸೆಟ್‌ನಲ್ಲೇ 21 ವರ್ಷದ ತುನಿಷಾ ಶರ್ಮಾ ಅವರ ಮೃತದೇಹ ಶನಿವಾರ ಪತ್ತೆಯಾಗಿತ್ತು.

Leave a Reply

Your email address will not be published. Required fields are marked *

error: Content is protected !!