February 4, 2026

ಮಂಗಳೂರು: ಜಲೀಲ್ ಹತ್ಯೆ ಪ್ರಕರಣ: ಹಂತಕರ ವಿರುದ್ಧ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಒತ್ತಾಯಿಸಿದ ಮಾಜಿ ಶಾಸಕ ಮೊಯ್ದಿನ್ ಬಾವ

0
image_editor_output_image425273402-1671980591162

ಮಂಗಳೂರು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ಮೊಯ್ದಿನ್ ಬಾವ, ಜಲೀಲ್ ಹಂತಕರ ವಿರುದ್ಧ ಕಠಿಣ ಕ್ರಮ ಜರುಗಿಸಿ ನ್ಯಾಯ ಒದಗಿಸಿಕೊಡಲು ಮನವಿ ಮಾಡಿದ್ದಾರೆ. 

ಮೂಡುಬಿದಿರೆ ತಾಲೂಕಿನ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ  ಆಯೋಜಿಸಲಾಗಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿ.25ರ ಭಾನುವಾರ ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ ಆಗಮಿಸಿದ್ದರು. ಈ ವೇಳೆ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಮೊಯ್ದಿನ್ ಬಾವಾ, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶಾಹುಲ್ ಹಮೀದ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!