ಕ್ರಿಕೆಟ್ ಆಡುತ್ತಿದ್ದಾಗ ಚಾಕುವಿನಿಂದ ಇರಿದ ಅಪರಿಚಿತರು: ಇಬ್ಬರು ಯುವಕರು ಸಾವು
ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಡಬಲ್ ಮರ್ಡರ್ ಆಗಿರುವ ಘಟನೆ ತಾಲೂಕಿನ ಹೊರವಲಯದ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್ (22) ಹಾಗೂ ಗಿರೀಶ್ ನಾಗಣ್ಣವರ (22) ಹತ್ಯೆಯಾಗಿದೆ.
ನಿನ್ನೆ ಶಿಂದೋಳಿ ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಆಯೋಜನೆ ಮಾಡಲಾಗಿತ್ತು. ಈ ವೇಳೆ ಅಪರಿಚಿತ ವ್ಯಕ್ತಿಗಳು ಮೈದಾನದಲ್ಲಿ ವಾಹನ ನುಗ್ಗಿಸಿದ್ದಾರೆ. ಇದಕ್ಕೆ ಕ್ರಿಕೆಟ್ ಆಡುತ್ತಿದ್ದ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದರಿಂದ ಸಿಟ್ಟಾದ ಅಪರಿಚಿತ ವಾಹನ ಚಾಲಕ ವಾಹನದಿಂದ ಕೆಳಗಿಳಿದು ಇಬ್ಬರಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.





