March 26, 2026

ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತನೆ: ಶಿಕ್ಷಕನ‌ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

0
Screenshot_2022-12-26-10-24-33-52_680d03679600f7af0b4c700c6b270fe7.jpg

ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ.

ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಡಿ.23 ರಂದು ಶಿಕ್ಷಕನ ವಿರುದ್ಧ ದೂರು ನೀಡಿದ್ದಾಳೆ.

ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ ಐಪಿಸಿ (IPC) ಸೆಕ್ಷನ್ 354 (A), 109, 506 ಅಡಿಯಲ್ಲಿ, ಪೋಕ್ಸೋ (POCSO Act) ಹಾಗೂ ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ-2015ರ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!