February 3, 2026

ಸುರತ್ಕಲ್: ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

0
IMG-20221224-WA0144.jpg

ಮಂಗಳೂರು: ಕೃಷ್ಣಾಪುರ 4ನೆ ಬ್ಲಾಕ್ ಬಳಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ಎನ್.ಶಶಿಕುಮಾರ್
ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಅವರು ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಸದ್ಯದ ವಿಚಾರಣೆಯಲ್ಲಿ ಬಂಧಿತ ಮೂವರು ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಯಾವ ಕಾರಣಕ್ಕೆ ಈ ಕೊಲೆ ಮಾಡಲಾಗಿದೆ, ಇದರಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಶಶಿಕುಮಾರ್ ಅವರು ತಿಳಿಸಿದ್ದಾರೆ.

ಜಲೀಲ್ ಕೊಲೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಬಂಧನಕ್ಕೆ ಕ್ರಮ ಕೈಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಅಬ್ದುಲ್ ಜಲೀಲ್ ಅವರನ್ನು ಶನಿವಾರ ರಾತ್ರಿ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿಯಿರುವ ಅವರ ಫ್ಯಾನ್ಸಿ, ಚಪ್ಪಲಿ ಅಂಗಡಿಗೆ ನುಗ್ಗಿದ ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಜಲೀಲ್ ಅವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಅವರು ಮೃತಪಟ್ಟಿದ್ದರು

Leave a Reply

Your email address will not be published. Required fields are marked *

You may have missed

error: Content is protected !!