ಬಂಟ್ವಾಳ ವಿವಿಧೆಡೆ ಕಳ್ಳತನ ಪ್ರಕರಣ: ಆರೋಪಿಯ ಬಂಧನ

ಬಂಟ್ವಾಳ: ಬಂಟ್ವಾಳ ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧೆಡೆ ನಡೆಸಿದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ಇರ್ಫಾನ್ ಬಂಧಿತ ಆರೋಪಿ. ಬಿ.ಸಿ.ರೋಡ್ ಸಮೀಪದ ಗಾಣದಪಡುವಿನಲ್ಲಿ ಹೋಲ್‌ಸೇಲ್ ಅಂಗಡಿಯೊಂದರ ಶಟರ್ ಬೀಗ ಮುರಿದು 20 ಸಾವಿರ ರೂ. ಮೌಲ್ಯದ 2 ಮೊಬೈಲ್‌ಗಳು ಹಾಗೂ 10 ಸಾವಿರ ರೂ. ನಗದನ್ನು ಕಳವುಗೈದಿದ್ದ. ಈ ಸಂಬಂಧ ಅಂಗಡಿ ಮಾಲಕರು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.