ಫಾರ್ಮಾ ಲ್ಯಾಬ್ಸ್ ನಲ್ಲಿ ಬೆಂಕಿ ಅವಘಡ: ನಾಲ್ವರು ಕಾರ್ಮಿಕರು ಸಜೀವದಹನ

ವಿಶಾಖಪಟ್ಟಣಂ: ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಆಂಧ್ರದ ಅನಕಾಪಲ್ಲಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾನೆ. ನಿರ್ವಹಣೆ ಕಾರ್ಯ ನಡೆಯುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ರಾಜ್ಯ ಕೈಗಾರಿಕಾ ಸಚಿವ ಅಮರನಾಥ್ ಈ ಬಗ್ಗೆ ಮಾತಾನಾಡಿ, ಘಟನೆಯಲ್ಲಿ ಗಂಭೀರ ಗಾಯಗೊಂಡ ಕಾರ್ಮಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈ ಅವಘಡದ ಬಗ್ಗೆ ಸಿಎಂ ಜಗನ್ ಅವರಿಗೆ ಮಾಹಿತಿ ನೀಡಿದ್ದೇನೆ. ಸಿಎಂ ಮೃತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವವನ್ನು ಘೋಷಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಅವಘಡದ ಕಾರಣವನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.