March 19, 2026

ಮುಡಿಪು: ಕಾರು ಢಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿ ಮೃತ್ಯು

0
IMG-20221227-WA0019.jpg

ಮುಡಿಪು: ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಡಿಪು ಸಮೀಪ ನಡೆದಿದೆ.

ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ.

ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದ್ದು, ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ಇನ್ನು ಬಾಲಕನಿಗೆ ಢಿಕ್ಕಿ ಹೊಡೆದ ಕಾರು ನಂತರ ಸಮೀಪದಲ್ಲೇ ಇದ್ದ ರಿಕ್ಷಾಗೂ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರು ಮಾಲಕ ಟ್ರಯಲ್ ನೋಡಲು ಇನ್ನೋರ್ವ ಗೆಳೆಯನಿಗೆ ಕಾರು ನೀಡಿದ್ದ ಸಂದರ್ಭ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಮಂಗಳೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!