March 19, 2026

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಲಾರಿ

0
IMG-20221228-WA0014.jpg

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದು ಲಾರಿಯೊಂದು ರಸ್ತೆಗೆ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪ ನಡೆದಿದೆ.

ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಹಲವು ಲಾರಿಗಳು ಇದೇ ರೀತಿ ಅಪಘಾತಕ್ಕೀಡಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣ ಇಂತಹ ಘಟನೆ ಸಂಭವಿಸುತ್ತಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!