ಪ್ರಧಾನಿ ನರೇಂದ್ರ ಮೋದಿ ತಾಯಿ ಆಸ್ಪತ್ರೆಗೆ ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಬುಧವಾರ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈ ವರ್ಷ 99 ವಯಸ್ಸನ್ನು ಪೂರೈಸಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ, ಪ್ರಧಾನಿ ಮೋದಿಯವರ ತಾಯಿಯ ಆರೋಗ್ಯ ಹದಗೆಟ್ಟಿದ್ದು, ಇದೀಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.