February 4, 2026

ಉಡುಪಿ: ಮದ್ಯಪಾನ ಮಾಡಿ ಶಾಲಾ ಜಗಲಿಯಲ್ಲೇ ಮಲಗಿದ ಶಿಕ್ಷಕ!

0
IMG-20221228-WA0016.jpg

ಉಡುಪಿ: ಪೆರ್ಡೂರು ಗ್ರಾಮದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲೇ ಮಲಗಿದ್ದನೆನ್ನಲಾದ ಘಟನೆ ನಡೆದಿದೆ.

ಪೆರ್ಡೂರು ಗ್ರಾಮದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಇತ್ತೀಚೆಗೆ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆಯೇ ಕಂಠಪೂರ್ತಿ ಕುಡಿದು ಜಗಲಿಯಲ್ಲಿ ಮಲಗಿದ್ದರು ಎನ್ನಲಾಗಿದೆ.

ಗ್ರಾಮದ ಶಾಲೆಯ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ನೇತೃತ್ವದ ನಿಯೋಗವು ಕ್ಷೇತ್ರ ಶಿಕ್ಷಣಾಧಿಕಾರಿಗೆ ನಿಗ್ರಾಪಂ ಉಪಾಧ್ಯಕ್ಷೆ ಚೇತನಾ ಶೆಟ್ಟಿ, ಸದಸ್ಯ ಕೆ.ತುಕಾರಾಮ ನಾಯಕ್, ಶಾಲಾಭಿವೃದ್ಧಿ ಸಮಿತಿಯ ರಮೇಶ್ ಪೂಜಾರಿ, ಬೈದಷ್ರಿ ಫ್ರೆಂಡ್ಸ್ ನ ಸತೀಶ್ (ಅಣ್ಣು), ಗ್ರಾಮಸ್ಥರು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!