February 4, 2026

ಸಾಗರ: ಮೂವರು ಕಾಲೇಜು ವಿದ್ಯಾರ್ಥಿನಿಯರಿಗೆ ಟಿಪ್ಪರ್ ಢಿಕ್ಕಿ: ಗಂಭಿರ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಮೃತ್ಯು

0
IMG-20221228-WA0026.jpg

ಸಾಗರ: ಸಾಗರದ ಬಿಸಿಎಂ ಹಾಸ್ಟೆಲ್ ನಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಇಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವಳಿಗೆ ಗಂಭೀರ ಗಾಯಗಳಾಗಿತ್ತು. ಗಂಭೀರ ಗಾಯಗೊಂಡ 18 ವರ್ಷದ ಪ್ರತಿಮಾ ಇದೀಗ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.

ಇನ್ನು ವಿದ್ಯಾರ್ಥಿನಿ ಮೃತಪಟ್ಟ ಹಿನ್ನಲೆಯಲ್ಲಿ ಕಾಲೇಜಿಗೆ ರಜೆಯನ್ನು ಘೋಷಿಸಲಾಗಿದ್ದು, ಈ ಸಂಬಂಧ ಸಾಗರದ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!