March 26, 2026

ಮಂಗಳೂರು: ಜಲೀಲ್ ಹತ್ಯೆ ಪ್ರಕರಣ: ಆರೋಪಿ ಲಕ್ಷ್ಮೀಶ ದೇವಾಡಿಗ 14 ದಿನಗಳ ಪೊಲೀಸ್ ಕಸ್ಟಡಿ
 

0
santhu-10.11.22-laksmis.jpg

ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕಾಟಿಪಳ್ಳ 4ನೇ ಬ್ಲಾಕ್‌ ನಿವಾಸಿ ಲಕ್ಷ್ಮೀಶ ದೇವಾಡಿಗನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಲಾಗಿದೆ.

ಲಕ್ಷಮೀಶ ದೇವಾಡಿಗ ಜಲೀಲ್ ಹತ್ಯೆ ಪ್ರಕರಣ ಸೂತ್ರದಾರ ಎನ್ನಲಾಗಿದೆ. ಹತ್ಯೆಗೂ ಮುನ್ನ ವಾರದ ಹಿಂದೆ ಜಲೀಲ್ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿ, ಕಲ್ಲೆಸೆದು ಹಾನಿಮಾಡಿದ್ದ ಎಂದು ತಿಳಿದುಬಂದಿದೆ. ಜೊತೆಗೆ ಜಲೀಲ್‌ಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದ ಎನ್ನಲಾಗಿದೆ.

ಪಿಂಕಿ ನವಾಝ್ ಕೊಲೆ ಯತ್ನ ಪ್ರಕರಣದಲ್ಲೂ ಈತನ ಕೈವಾಡ ಇದೆ ಎನ್ನಲಾಗಿದೆ. ಇದರ ಜೊತೆಗೆ ಗಾಂಜಾ ಸೇವನೆ ಮಾಡಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಮಕ್ಕಳಿಗೆ ಹಲ್ಲೆ ನಡೆಸಿದ ಆರೋಪವನ್ನು ಕೂಡ ಈತ ಎದುರಿಸುತ್ತಿದ್ದಾನೆ.

ಈತನ ವಿರುದ್ಧ ಸುರತ್ಕಲ್ ಹಾಗೂ ಪಣಂಬೂರು ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ರೌಡಿ ಶೀಟ್ ಹಾಕಲಾಗಿದೆ.

Leave a Reply

Your email address will not be published. Required fields are marked *

error: Content is protected !!