April 12, 2025

ಮಾಜಿ ಸಿಎಂ ಚಂದ್ರಬಾಬು ನಾಯ್ಡು ರ‍್ಯಾಲಿ ವೇಳೆ ಕಾಲ್ತುಳಿತ: 8 ಜನರು ಮೃತ್ಯು, ಹಲವರಿಗೆ ಗಾಯ

0

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಟಿಡಿಪಿ ರ‍್ಯಾಲಿ ವೇಳೆ ಕಾಲ್ತುಳಿತ ಉಂಟಾಗಿ ಜನರು ಸಾವನ್ನಪ್ಪಿರುವಂತಹ ಘಟನೆ ನೆಲ್ಲೂರು ಕ್ಷೇತ್ರದ ವ್ಯಾಪ್ತಿಯ ಕಂದುಕೂರಿನಲ್ಲಿ ನಡೆದಿದೆ.

ಮಾಜಿ ಸಿಎಂ ಚಂದ್ರಬಾಬು ನಾಯ್ಡು ಟಿಡಿಪಿ ಬಹಿರಂಗ ಸಭೆ ಆಯೋಜಿಸಿದ್ದರು. ಈ ವೇಳೆ ಏಕಾಏಕಿ ವೇದಿಕೆ ಹತ್ತಿರ ನೂಕುನುಗ್ಗಲು ಉಂಟಾಗಿದ್ದು, 8 ಜನ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ.

ಗಾಯಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.

 

 

Leave a Reply

Your email address will not be published. Required fields are marked *

error: Content is protected !!