ಕಾರ್ಕಳ: ಕಾರು ಮತ್ತು ಬೈಕ್ ನಡುವೆ ಅಪಘಾತ: ಸವಾರ ಸಹಿತ ಮಗು ಗಂಭೀರ
ಕಾರ್ಕಳ: ಕಾರು ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ಎರಡು ವರ್ಷದ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಅಂಡಾರು ಗ್ರಾಮದ ಕೊಂದಲ್ಕೆ ನಿವಾಸಿ ನಿತ್ಯಾನಂದ ಕುಲಾಲ್( 32) ಹಾಗೂ ಅವರೊಂದಿಗೆ ಇದ್ದ ಮೂರು ವರ್ಷದ ಮಗು ಕೂಡ ಗಂಭೀರವಾಗಿ ಗಾಯಗೊಂಡಿದೆ.
ಇನ್ನು ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ.
ಬೈಕ್ ಸವಾರ ನಿತ್ಯಾನಂದ ತನ್ನ ಸಹೋದರಿಯ ಮಗುವನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಕಾರ್ಕಳದಿಂದ ಅಂಡಾರು ಕಡೆಗೆ ಹೋಗುತ್ತಿದ್ದಾಗ ಹೆಬ್ರಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಮಾರುತಿ ಬಲೆನೊ ಕಾರು ಚಾಲಕ ಎದುರಿನಲ್ಲಿ ಹೋಗುತ್ತಿದ್ದ ವಾಹನವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಬಲಗಡೆ ತಿರುಗಿಸಿದಾಗ ಘಟನೆಗೆ ಕಾರಣವೆನ್ನಲಾಗಿದೆ. ಪರಿಣಾಮವಾಗಿ ನಿತ್ಯಾನಂದ ಕುಲಾಲ್ ಸವಾರಿ ಮಾಡಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಇಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಳ್ಳಲು ಕಾರಣವಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ನುಜ್ಜುಗುಜ್ಜಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.