ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ
ತುಮಕೂರು: ಗುತ್ತಿಗೆದಾರರೊಬ್ಬರು ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತ ಗುತ್ತಿಗೆದಾರನನ್ನು ತುಮಕೂರು ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್ ಪ್ರಸಾದ್ (50) ಎಂದು ಗುರುತಿಸಲಾಗಿದೆ.
ಪಿಡಬ್ಲ್ಯೂಡಿ ಇಲಾಖೆಯ ಸಿವಿಲ್ ಕಂಟ್ರಾಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಟಿ.ಎನ್ ಪ್ರಸಾದ್, ಸಾಲ ಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದು, ಮೃತ ದೇಹವನ್ನ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.