March 26, 2026

ಉಳ್ಳಾಲ: ಚರಂಡಿಯಲ್ಲಿ ಸೆಕ್ಯುರಿಟಿ ಗಾಡ್೯ ನ ಶವ ಪತ್ತೆ
 

0
dead_body_6004752_835x547-m_5ec8d43ea2651.jpg

ಉಳ್ಳಾಲ: ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾಡ್೯ ಆಗಿದ್ದ ವ್ಯಕ್ತಿಯ ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನ ಮಳೆ ನೀರು ಹರಿಯುವ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ ( 45) ಮೃತದೇಹ ಪತ್ತೆಯಾಗಿದೆ.

ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾಡ್೯ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಖಾಸಗಿ ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸುತ್ತಿದ್ದರು. ಡಿ.27 ರಿಂದ ಕರ್ತವ್ಯಕ್ಕೆ ಹಾಜರಾಗದೆ ಇದ್ದವರು. ಇಂದು ನಸುಕಿನ ಜಾವ ಕುತ್ತಾರು ಜಂಕ್ಷನ್ನಿನಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ‌.

ದೇರಳಕಟ್ಟೆಯ ಬೆಳ್ಮ ಭಾಗದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗುವಿನ ಜತೆಗೆ ವಾಸವಾಗಿದ್ದರು. ಪತ್ನಿ ಸರಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಜೆ ನಂತರ ದೇರಳಕಟ್ಟೆ ಖಾಸಗಿ ಹೊಟೇಲಿನಲ್ಲಿ ಅಡುಗೆ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಮೃತ ಗಣೇಶ್ ಕುಡಿತದ ಅಭ್ಯಾಸವನ್ನು ಹೊಂದಿದ್ದರು. ಅಪರಿಚಿತ ವಾಹನ ಢಿಕ್ಕಿ ಹೊಡೆದು ಚರಂಡಿಗೆ ಎಸೆಯಲ್ಪಟ್ಟು ಸಾವನ್ನಪ್ಪಿದರೋ ಅನ್ನುವ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ತಲೆಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!