February 3, 2026

ಬೋಳಿಯಾರ್: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆ ಪ್ರಕರಣ:
ಮೂವರು ಆರೋಪಿಗಳ ಬಂಧನ

0
IMG-20211116-WA0028.jpg

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆ ಯತ್ನಿಸಿದ ಮೂವರು ಯುವಕರನ್ನು ಕೊಣಾಜೆ ಪೊಲೀಸರು ನ.15 ರಂದು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳದ ಕುರ್ನಾಡು ನಿವಾಸಿ ಶರಣ್ (24), ವಿಘ್ನೇಶ್ (23) ಮತ್ತು ಹರ್ಷಿತ್ (22) ಎನ್ನಲಾಗಿದೆ.

ನ.14 ರಂದು ಮಧ್ಯರಾತ್ರಿ ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಬಂದು ದೂರುದಾರ ಅಬ್ದುಲ್ ಸಮೀರ್ ಮನೆ ಬಳಿ ಅವರ ಸಮುದಾಯವನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಮೀರ್ ಮನೆಯಿಂದ ಹೊರಗೆ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಮಸೀದಿಗೆ ನುಗ್ಗಿ ಧರ್ಮಗುರುಗಳನ್ನು ನಿಂದಿಸಿ ಹಲ್ಲೆಗೆ ಯತ್ನಿಸಿ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!