ಮೂಗಿಮ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಾವು

ರಾಯಚೂರು: ಮೂಗು ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಹುಡುಗಿ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮೃತ ದುರ್ದೈವಿ ಯುವತಿಯನ್ನು ರಾಯಚೂರು ನಗರದ ರಾಜೇಶ್ವರಿ (18) ಎಂದು ಗುರುತಿಸಲಾಗಿದೆ. ಸದ್ಯ ಹುಡುಗಿ ಕುಟುಂಬಸ್ಥರು ರಾಯಚೂರು ನಗರದ ರಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವನ್ನಪಿರುವುದಾಗಿ ಆರೋಪ ಮಾಡುತ್ತಿದ್ದಾರೆ.
ರಿಮ್ಸ್ ಆಸ್ಪತ್ರೆ ಮುಂದೆ ಮೃತಳ ಕುಟುಂಬಸ್ಥರು ಹಾಗೂ ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಸ್ಪತ್ರೆ ಮುಂದೆ ರಾಜೇಶ್ವರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.