ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ನಿವಾಸಕ್ಕೆ ಬೆಂಕಿ ಹಚ್ಚಿ ಪರಿಕರಗಳ ಧ್ವಂಸ
ನೈನಿತಾಲ್: ಅಯೋಧ್ಯೆಗೆ ಸಂಬಂಧಿಸಿದ ಪುಸ್ತಕದಲ್ಲಿ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಹಿಂದೂ ಧರ್ಮದ ಬಗ್ಗೆ ಉಲ್ಲೇಖ ಮಾಡಿದ್ದು, ಇದರ ವಿರುದ್ಧ ಆಕ್ರೋಶಗಳು ಹೆಚ್ಚಾಗುತ್ತಿವೆ.
ಸೋಮವಾರದಂದು ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ನೈನಿತಾಲ್ ನಲ್ಲಿರುವ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿ ಧ್ವಂಸಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಪ್ಪತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ತಮ್ಮ ಫೇಸ್ ಬುಕ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರದ ಮಾಜಿ ಸಚಿವ ಖುರ್ಷಿದ್, ನನ್ನ ಸ್ನೇಹಿತರು ಬಂದರೆಂದು ಬಾಗಿಲು ತೆರೆದಿದ್ದೆ. ಆ ಸಂದರ್ಭದಲ್ಲಿ ಅವರು ಈ ರೀತಿ ಮಾಡಿದ್ದಾರೆ. ನಾನು ಹಿಂದೂ ಧರ್ಮದ ಬಗ್ಗೆ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.





