May 16, 2026

ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತ್ಯು

0
IMG-20230101-WA0057.jpg

ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹರೀಶ್ ಕುಮಾರ್ ಅವರು ಕಳೆದ 21 ವರ್ಷಗಳಿಂದ ಅವರು ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆಗಾಗಿ ಊರಿಗೆ ಬಂದಿದ್ದ ಡಿ. 31 ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಮೃತರು ಪತ್ನಿ, 6 ವರ್ಷದ ಪುತ್ರ ಹಾಗೂ ಒಂದುವರೆ ವರ್ಷದ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!