March 19, 2026

ಸುಳ್ಯ: ಅನಾರೋಗ್ಯಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು

0
IMG-20230101-WA0060.jpg

ಸುಳ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜನವರಿ 1ರ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ.

ಅರಂತೋಡು ಗ್ರಾಮದ ಉದಯನಗರ ಸಮೀಪದ ಉಳುವಾರು ನಿವಾಸಿ ಮಧುಸೂದನ (42) ಮೃತಪಟ್ಟವರು.

ಪೆರಾಜೆ ಭಾಗದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವರು ಏಕಾಏಕಿ ಅನಾರೋಗ್ಯಕ್ಕೊಳಗಾದರು. ಕೂಡಲೇ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಮುಂಜಾನೆ ಸಾವನ್ನಪ್ಪಿದರು.

ಮೃತರು ಪತ್ನಿ, ಪುತ್ರ, ಪುತ್ರಿ, ತಾಯಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!