April 1, 2026

ಕೆರೆಯಲ್ಲಿ ಮುಳುಗಿ ಫೋಟೊಗ್ರಾಫರ್ ಮೃತ್ಯು

0
image_editor_output_image1636513934-1672633514570.jpg

ರಾಮನಗರ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಉಡುಪಿ ಜಿಲ್ಲೆ ಕುಂದಾಪುರ ಮೂಲದ ಪ್ರಸನ್ನ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾವತ್ತೂರು ಕೆರೆಗೆ ಹೊಸ ವರ್ಷಾಚರಣೆ ಮಾಡಲು ಸಹೋದರ ಕೌಶಿಕ್ ಸೇರಿ ಐವರು ಸ್ನೇಹಿತರ ಜೊತೆ ಪ್ರಸನ್ನ ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಾಡಲು ಹೋಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಫೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದರು. ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊ ಗ್ರಾಫರ್ ಆಗಿ ಕಾರ್ಯ ನಿರ್ಹಿಸುತ್ತಿದ್ದರು.

ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದರು. ಇದೆ ಕಾರಣಕ್ಕೆ ಅವರು ಸಂಸದ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.

Leave a Reply

Your email address will not be published. Required fields are marked *

error: Content is protected !!