ನೋಟು ನಿಷೇಧ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: 2016 ರ ನವೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಮಾಡಿದ್ದು, ಇದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದೆ.
ಅಲ್ಲದೆ ಕೇಂದ್ರ ಸರಕಾರವು ಅದನ್ನು ನಿಷೇಧಿಸಿದೆ ಎಂಬ ಕಾರಣಕ್ಕೆ ನಿರ್ಧಾರವನ್ನು ತಪ್ಪೆಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದೆ.
ಆರ್’ಬಿಐ ಒಪ್ಪಿಗೆ ಪಡೆದೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ತಜ್ಞರ ಸಲಹೆ ಪಡೆದು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.