ವಿಟ್ಲ: ಬೊಳಂತಿಮೊಗರು ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಬೊಳಂತಿಮೊಗರು ವೆಲ್ ಫೇರ್ ಟ್ರಸ್ಟ್ ವತಿಯಿಂದ ಶಾಲಾ ವಾರ್ಷಿಕ ಸಂಭ್ರಮ
ವಿಟ್ಲ: ಬೊಳಂತಿಮೊಗರು ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಬೊಳಂತಿಮೊಗರು ವೆಲ್ ಫೇರ್ ಟ್ರಸ್ಟ್ ವತಿಯಿಂದ ಶಾಲಾ ವಾರ್ಷಿಕ ಸಂಭ್ರಮ 2022-23 ಶನಿವಾರ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ 16 ಮಕ್ಕಳು ಇದ್ದ ಈ ಶಾಲೆಯಲ್ಲಿ ಇಂದು ನೂರರ ಗಡಿ ದಾಟಿದೆ. ಇಲ್ಲಿಯ ಹಳೆ ವಿದ್ಯಾರ್ಥಿಗಳ, ದಾನಿಗಳ ಪರಿಶ್ರಮ ಈ ಸರಕಾರಿ ಅಭಿವೃದ್ಧಿ ಹೊಂದಲು ಕಾರಣವಾಗಿದೆ ಎಂದರು.
ಉದ್ಯಮಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಮಾತನಾಡಿ ಸರಕಾರಿ ಶಾಲೆಯನ್ನು ಉಳಿಸುವ ಕಾರ್ಯವಾಗಬೇಕು. ಸರಕಾರಿ ಶಾಲೆಯಲ್ಲಿ ಕಲಿತವರು ಇಂದು ಉನ್ನತ ಸ್ಥಾನದಲ್ಲಿದ್ದಾರೆ. ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗಿದೆ ಎಂದರು.
ಪಿ.ಎ ಎಜ್ಯುಕೇಶನ್ ಟ್ರಸ್ಟ್ ನ ಡಾ.ಸಯ್ಯದ್ ಅಮೀನ್ ಅಹಮ್ಮದ್, ದುಬೈ ಖಲೀಫಾ ಯೂನಿವರ್ಸಿಟಿ ಪ್ರಾಧ್ಯಾಪಕ ಡಾ. ಅಬ್ದುಲ್ ರಹಿಮಾನ್ ಮತ್ತು ಜೀವಲ್ ಖಾನ್, ಪೌಲ್ ಡಿ ಸೋಜ ಅವರನ್ನು ಸನ್ಮಾನಿಸಲಾಯಿತು.
ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿನ ಯಾಸಿನ್ ಬೇಗ್, ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಜಿಲ್ಲಾಧ್ಯಕ್ಷ ಮೊಯ್ದಿನ್ ಕುಟ್ಟಿ, ಉಪಾಧ್ಯಕ್ಷ ಉಮ್ಮರ್ ಫಾರೂಕ್, ಸಿ.ಆರ್ ಪಿ ಬಿಂದು ಬಿ.ಜೆ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ವಿಕೆಎಂ ಅಶ್ರಫ್, ಲತಾ ಅಶೋಕ್, ಡೀಕಯ್ಯ, ಬೊಳಂತಿಮೊಗರು ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷ ವಿ ಅಬ್ದುಲ್ ರಹಿಮಾನ್, ಶಾಲಾ ಮುಖ್ಯೋಪಾಧ್ಯಾಯ ಉದಯ ವಿ, ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ಎ ಮಹಮ್ಮದ್ ಉಪಸ್ಥಿತರಿದ್ದರು.
ಸಹ ಶಿಕ್ಷಕ ಚಂದ್ರಶೇಖರ ಗೌಡ ಸ್ವಾಗತಿಸಿದರು. ಶಿಕ್ಷಕಿ ಸಕೀನ ವಂದಿಸಿದರು. ಸಿಕಂದರ್ ಖಾನ್ ಸಹಕರಿಸಿದರು.