May 14, 2026

ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

0
image_editor_output_image184165007-1672738955236.jpg

ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ ನಿವಾಸಿ ನಿಝಾಮುದ್ದೀನ್ ಯಾನೆ ನಿಝಾಮ್ (32) ಹಾಗು ಜಪ್ಪುವಿನ‌ ನಿವಾಸಿ ರಝೀಮ್ ಯಾನೆ‌ ರಾಫಿ (31) ಎಂಬವರನ್ನು ಬಂಧಿಸಲಾಗಿದೆ.

ಇವರಿಬ್ಬರು ಸೋಮವಾರ ನಗರದ ನಂತೂರು ಜಂಕ್ಷನ್ ಬಳಿ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಶಕ್ಕೆ ಪಡೆದು ವಿಚಾರಿಸಿದಾಗ ಖೋಟಾ ನೋಟುಗಳನ್ನು ಚಲಾವಣೆಯ ಜಾಲ ಬಯಲಿಗೆ ಬಂದಿದೆ.

ಆರೋಪಿಗಳಿಂದ 500 ರೂಪಾಯಿ ಮುಖಬೆಲೆಯ 4.50 ಲಕ್ಷ ರೂಪಾಯಿ ಖೋಟಾ ನೋಟುಗಳನ್ನು ವಶಪಡಿಸಲಾಗಿದೆ.

ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ಖೋಟಾ ನೋಟುಗಳನ್ನು ಪಡೆದಿರುವ ಆರೋಪಿಗಳು ನಗರದಲ್ಲಿ ಸ್ಕೂಟರ್‌ವೊಂದನ್ನು ಕದ್ದು ಅದರಲ್ಲಿ ಹಣ ಚಲಾವಣೆಗೆ ಯತ್ನಿಸುತ್ತಿದ್ದರು ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!