February 2, 2026

‘ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ’: ಪಕ್ಷ ತೊರೆದ ತಮಿಳುನಾಡು ಬಿಜೆಪಿ ನಾಯಕಿ

0
IMG-20230103-WA0019.jpg

ಚೆನ್ನೈ: ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ್ರಿ ರಘುರಾಮ್ ಅವರು ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತಿ ಟ್ವೀಟ್ ಮಾಡಿರುವ ಗಾಯತ್ರಿ, ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ, ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಇದರಿಂದಾಗಿ ನಾನು ಪಕ್ಷ ತೊರೆಯುತ್ತಿದ್ದೇನೆ ಎಂದಿದ್ದಾರೆ.

ಇನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿರುವ ಮಾಜಿ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಗಾಯತ್ರಿ ರಘುರಾಮ್‌ ಗಂಭೀರ ಆರೋಪ ಮಾಡಿದ್ದು, ಅಣ್ಣಾಮಲೈ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ, 6 ತಿಂಗಳು ಅಮಾನತು ಮಾಡಿ ಪಕ್ಷದಿಂದ ದೂರವಿರಿಸಿದರು ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!