ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟ: 10 ಮಂದಿಗೆ ಗಾಯ
ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿಗೆ ಗಾಯವಾದ ಘಟನೆ ನಡೆದಿದೆ.
ಬುಧವಾರ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ವಸತಿಗೃಹದ ಮನೆಯೊಂದರಲ್ಲಿ ಗ್ಯಾಸ್ ಲೀಕೇಜ್ ಆಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದೆ.




