March 28, 2026

ರಸ್ತೆ ಗುಂಡಿ ಸರಿ ಮಾಡುವ ಯೋಗ್ಯತೆಯೂ ಬಿಜೆಪಿಗಿಲ್ಲ: ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಯು.ಟಿ.ಖಾದರ್ ಕಿಡಿ

0
image_editor_output_image1770998534-1672823441006.jpg

ಮಂಗಳೂರು: ರಸ್ತೆ ಗುಂಡಿ ಸರಿ ಮಾಡುವ ಅರ್ಹತೆ ಹಾಗೂ ಯೋಗ್ಯತೆ ಇವರಿಗೆ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಅಧಿಕಾರಕ್ಕೆ ಬಂದ ಮೇಲೆ ಏನೆಲ್ಲ ಮಾಡುತ್ತೇನೆ ಹೇಳಿದ್ದಾರೋ ಅದು ಆಗಿಲ್ಲ, ದಕ್ಷಿಣ ಕನ್ನಡ ಜಿಲ್ಲೆಗೆ ಕುಚಲಕ್ಕಿ ತರಲು ಯೋಗ್ಯತೆ ಇಲ್ಲದ ಇವರು ಜನಪ್ರತಿನಿಧಿಗಳಾ? ಇವರಿಗೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ ಅಂತ ಜನರಿಗೆ ಹೇಳಿದ್ದಾರೆ.

ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರದ ಫ್ಯೂಲ್ ಕಮ್ಯೂನಲ್ ಫ್ಯೂಲ್ ಆಗಿದ್ದು, ಅವರ ಸೈಲೆನ್ಸರ್ ಹೊಗೆ ವಿಷ, ಅದು ಯಾರನ್ನೂ ಬದುಕಿಸಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

error: Content is protected !!