February 3, 2026

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಕರಾವಳಿಯ ಅಬ್ದುಲ್ ನಝೀರ್ ನಿವೃತ್ತಿ

0
452159-abdul-nazeer-e1642763297244.jpg

ನವ ದೆಹಲಿ: ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ 5 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ಕನ್ನಡಿಗ ಅಬ್ದುಲ್‌ ನಜೀರ್‌ ಬುಧವಾರ ನಿವೃತ್ತರಾಗಿದ್ದಾರೆ.

ಜಸ್ಟಿಸ್ ನಜೀರ್ ಅವರು ಜನವರಿ 5, 1958ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಜನಿಸಿದರು. ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದ ಅವರು ಫೆಬ್ರವರಿ 18, 1983ರಲ್ಲಿ ವಕೀಲಿಕೆ ಆರಂಭಿಸಿದರು. ಬಳಿಕ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್‌ ಮಾಡಿದರು. ಮೇ 12, 2003ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಅವರು ಹೈಕೋರ್ಟ್‌ನ ಖಾಯಂ ನ್ಯಾಯಮೂರ್ತಿಯಾದದ್ದು ಸೆಪ್ಟೆಂಬರ್ 24, 2004ರಲ್ಲಿ. ಬಳಿಕ ಫೆಬ್ರವರಿ 17, 2017ರಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು

ಈ ನಡುವೆ ನಜೀರ್‌ ಅವರ ಬಗ್ಗೆ, ಅವರ ಕೊನೆಯ ಕಲಾಪದಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾ.ಡಿ.ವೈ.ಚಂದ್ರಚೂಡ ಅವರು ಪ್ರಶಂಸಿಸಿದ್ದಾರೆ. ಅಯೋಧ್ಯೆ ರಾಮಮಂದಿರ ಪ್ರಕರಣ, ತ್ರಿವಳಿ ತಲಾಖ್‌, 500, 1000 ರು. ನೋಟುಗಳ ಅಪನಗದೀಕರಣ ಸೇರಿ ಹಲವು ಮಹತ್ವದ ತೀರ್ಪುಗಳನ್ನು ನಜೀರ್‌ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!