ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್
ನವ ದೆಹಲಿ: ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ವಿಚಾರಣೆಯಿಂದ ನ್ಯಾ.ಬೇಲಾ ಎಂ.ತ್ರಿವೇದಿ ಅವರು ಹಿಂದೆ ಸರಿದಿದ್ದಾರೆ. 11 ಅಪರಾಧಿಗಳ ಬಿಡುಗಡೆಯನ್ನು ದೇಶದ ಅತಿದೊಡ್ಡ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ನಿರ್ಣಾಯಕ ಪ್ರಕರಣದಲ್ಲಿ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ವಿರುದ್ಧದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಬೇಲಾ ತ್ರಿವೇದಿ ಬುಧವಾರ ಹಿಂದೆ ಸರಿದಿದ್ದಾರೆ.
ನ್ಯಾ.ಅಜಯ್ ರಸ್ತೋಗಿ ಮತ್ತು ನ್ಯಾ.ಬೇಲಾ ಎಂ.ತ್ರಿವೇದಿ ನೇತೃತ್ವದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಬೇಕಾಗಿತ್ತು. ಬುಧವಾರ ವಿಚಾರಣೆ ಆರಂಭವಾಗುತ್ತಲೇ ನ್ಯಾ.ರಸ್ತೋಗಿ ಅವರು ಬೆಳವಣಿಗೆಯನ್ನು ಪ್ರಕಟಿಸಿದರು.
ಈ ಹಿನ್ನೆಲೆಯಲ್ಲಿ ಹೊಸ ನ್ಯಾಯಪೀಠ ರಚನೆಯಾಗಬೇಕಾಗಿದೆ. ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರ ಎಸಗಿದ 11 ಮಂದಿಯನ್ನು ಬಿಡುಗಡೆ ಮಾಡಿದ 11 ಮಂದಿಯನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿವೆ.