ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಿಂದ ಸಂಜು ಸ್ಯಾಮ್ಸನ್ ಔಟ್

ಪುಣೆ: ಮಂಡಿ ನೋವಿಗೆ ಒಳಗಾಗಿರುವ ವಿಕೆಟ್ ಕೀಪರ್/ಬ್ಯಾಟ್ಸ್ ಮನ್ ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಿಂದ ಹೊರಬಿದ್ದಿದ್ದಾರೆ.
ಶ್ರೀಲಂಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ನಿರಾಸೆ ಮೂಡಿಸಿದ್ದ ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲಿಲ್ಲ ಎಂದು ಟೀಕೆಗೆ ಗುರಿಯಾಗಿದ್ದರು. ಇದೀಗ ಗಾಯದ ಕಾರಣ ಸರಣಿಯಿಂದಲೇ ಮುಂದಿನ 3 ಪಂದ್ಯಗಳಿಂದ ಹೊರಬಿದ್ದಿದ್ದಾರೆ.
ಮುಂಬೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಎಡಗೈ ಮಂಡಿಗೆ ಪೆಟ್ಟು ಮಾಡಿಕೊಂಡಿದ್ದರು. ಕೂಡಲೇ ವೈದ್ಯರ ಬಳಿ ಕರೆದೊಯ್ಯಲಾಗಿದ್ದು ತಪಾಸಣೆ ವೇಳೆ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದು, ಪುನಶ್ಚೇತನ ಶಿಬಿರಕ್ಕೆ ಶಿಫಾರಸು ಮಾಡಿದ್ದಾರೆ.
ಸಂಜು ಸ್ಯಾಮ್ಸನ್ ಬದಲಿಗೆ ಬಿಸಿಸಿಐ ಆಯ್ಕೆ ಸಮಿತಿ ಜಿತೇಶ್ ಶರ್ಮ ಅವರನ್ನು ಮುಂದಿನ 3 ಟಿ-20 ಪಂದ್ಯಗಳಿಗೆ ಆಯ್ಕೆ ಮಾಡಿದೆ.