February 3, 2026

ಕಾಂಗ್ರೆಸ್  ಪಕ್ಷದ ಸಭೆಯಲ್ಲಿ ಮಾರಾಮಾರಿ: ಇಬ್ಬರು ಮಹಿಳಾ ಕಾರ್ಯಕರ್ತೆಯರ ಬಂಧನ

0
image_editor_output_image-1082629624-1672908581430.jpg

ಬಳ್ಳಾರಿ: ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಜನವರಿ 3 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆಸಲಾಗಿತ್ತು.

ಈ ವೇಳೆ ಹೊಸಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ ಮತ್ತು ಶಿಲ್ಪಾ ನಡುವೆ ಮಾರಾಮಾರಿ ನಡೆದಿತ್ತು. ಕಲ್ಯಾಣ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಶಿಲ್ಪಾ, ಮತ್ತು ಯೋಗಲಕ್ಷ್ಮಿ ಹಾಗೂ ಸಂದೀಪ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಕೂಡ ನಡೆದಿತ್ತು.

ಆ ಬಳಿಕ ಶಿಲ್ಪಾ ಅವರು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯೋಗಲಕ್ಷ್ಮಿ ಮತ್ತು ಇತರರ ವಿರುದ್ಧ ದೂರು ಸಲ್ಲಿಸಿ, ಜಾತಿನಿಂದನೆ ಮತ್ತು ಮಾನಹಾನಿ ಪ್ರಕರಣ ದಾಖಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!