February 3, 2026

ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ‌ ಪ್ರಕರಣ: ವಿಕೃತಿ ಮೆರೆದ ವ್ಯಕ್ತಿಗಾಗಿ ಪೊಲೀಸರಿಂದ ಶೋಧ

0
delhi-police-forms-teams-to-nab-man-who-urinated-on-elderly-woman-during-air-indias-new-york-delhi-flight.jpg

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದ ವ್ಯಕ್ತಿಯನ್ನು ಪೊಲೀಸರು ಶೋಧಕಾರ್ಯಾಚರಣೆ ನಡೆಸುತ್ತಿದ್ದಾರೆ.

ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ವ್ಯಕ್ತಿಯ ದೂರಿನ ಆಧಾರದಲ್ಲಿ ಪೊಲೀಸರು ವಿಮಾನಯಾನ ನಿಯಮಗಳ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ದುರ್ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಸೆಕ್ಷನ್ 294 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಪತ್ತೆ ಮಾಡಲು ಹಲವು ತಂಡಗಳನ್ನು ರಚಿಸಲಾಗಿದೆ. ಆತನನ್ನು ಶೀಘ್ರವೇ ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರೀತಿ ವಿಕೃತಿ ಮೆರೆದ ಪ್ರಯಾಣಿಕನಿಗೆ ಏರ್ ಇಂಡಿಯಾ 30 ದಿನಗಳ ಪ್ರಯಾಣ ನಿಷೇಧವನ್ನು ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!