February 4, 2026

ಉಡುಪಿ: ಲಾರಿ ಮತ್ತು ಕಾರುಗಳ ಮಧ್ಯೆ ಸರಣಿ ಅಪಘಾತ: ಸಣ್ಣಪುಟ್ಟ ಗಾಯಗಳೊಂದಿಗೆ ಹಲವರು ಪಾರು

0
IMG-20230105-WA0042.jpg

ಉಡುಪಿ: ಸರಕು ತುಂಬಿದ ಲಾರಿ ಮತ್ತು ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಉಡುಪಿ ಅಂಬಲಪಾಡಿ ಜಂಕ್ಷನ್ ಬಳಿಯ ಹೆದ್ದಾರಿ 66ರಲ್ಲಿ ಅಭಿನಂದನಾ ಪೆಟ್ರೋಲ್ ಬಂಕ್ ಮುಂಭಾಗ ನಡೆದಿದ್ದು, ಘಟನೆಯಲ್ಲಿ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಕಾರುಗಳಲ್ಲಿದ್ದ ಇಬ್ಬರು ಮಹಿಳೆಯರು, ಓರ್ವ ಪುರುಷ ಹಾಗೂ ಒಂದು ಮಗುವಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ.

ಇನ್ನು ಸಾರ್ವಜನಿಕರ ಸಹಕಾರದೊಂದಿಗೆ ವಿಶು ಶೆಟ್ಟಿ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಶ್ರಮಿಸಿದರು. ಅಲ್ಲದೆ ಅಪಘಾತಕ್ಕೀಡಾದ ವಾಹನಗಳನ್ನು ಹೆದ್ದಾರಿಯಿಂದ ತೆರವುಗೊಳಿಸಿ ಹೆದ್ದಾರಿಯಲ್ಲಿ ವಾಹನದಟ್ಟಣೆ ಉಂಟಾಗದಂತೆ ನೋಡಿಕೊಳ್ಳಲಾಯಿತು.

ಈ ಪರಿಸರದಲ್ಲಿ ಹಲವು ಬಾರಿ ಅಪಘಾತಗಳು ಸಂಭವಿಸಿದ್ದು, ಈ ಹಿಂದೆ ಹಲವರು ಜೀವ ಕಳೆದುಕೊಂಡಿದ್ದಾರೆ. ಮೇಲ್ಸೇತುವೆ ನಿರ್ಮಿಸಬೇಕೆಂಬ ಸಾರ್ವಜನಿಕರ ದಶಕಗಳ ಬೇಡಿಕೆ ಇನ್ನೂ ಈಡೇರಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!