March 26, 2026

ಕಾಸರಗೋಡು: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ

0
IMG-20230105-WA0050.jpg

ಕಾಸರಗೋಡು: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ಹತ್ತು ಪವನ್ ಚಿನ್ನಾಭರಣ ದೋಚಿದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಹೇರೂರು ಬಿ.ಸಿ ರೋಡ್ ನಲ್ಲಿ ನಡೆದಿದೆ. ಆನಂದ ಎಂಬವರ ಮನೆಗೆ ನುಗ್ಗಿ ಕಳವು ನಡೆಸಲಾಗಿದೆ.

ಬುಧವಾರ ಮಧ್ಯಾಹ್ನ ಮನೆಯವರು ಸಮೀಪದ ಕುಟುಂಬ ದೇವಸ್ಥಾನಕ್ಕೆ ತೆರಳಿದ್ದರು. ಸಂಜೆ ಮರಳಿ ಬಂದಾಗ ಮನೆಯ ಅಡುಗೆ ಕೋಣೆಯ ಬಾಗಿಲು ಮುರಿದಿರುವುದು ಕಂಡು ಬಂದಿದೆ . ಗಮನಿಸಿದಾಗ ಮನೆಯ ಕೊಠಡಿಯ ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣಕಾಲವಾಗಿರುವುದು ಗಮನಕ್ಕೆ ಬಂದಿದೆ.

ಕುಂಬಳೆ ಠಾಣಾ ಪೊಲೀಸರಿಗೆ ದೂರು ನೀಡಲಾಗಿದ್ದು , ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!