February 4, 2026

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

0
IMG-20230106-WA0005.jpg

ಹಾವೇರಿ: ಜ.6 ರಿಂದ ಜ.8 ರವರೆಗೆ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಇಂದು ಚಾಲನೆ ನೀಡಲಾಯಿತು.

ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ಕನ್ನಡ ಗಂಧರ್ವ ಲೋಕ ಧರೆಗಿಳಿದಂತೆ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಲಾಗಿದೆ.

ಇನ್ನು ರಾಷ್ಟ್ರ ಧ್ವಜವನ್ನು ಕಾರ್ಮಿಕ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಉಸ್ತವಾರಿ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್‌, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ‌.ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ‌ ಹಿರೇಮಠ‌ ‌ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು.

ಈ ಕುರಿತು ಮಾತನಾಡಿರುವ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್ ಮಾಧ್ಯಮವದರೊಂದಿಗೆ ಮಾತನಾಡಿ, ನ ಭೂತೋ ನ ಭವಿಷ್ಯತಿಃ ಎನ್ನುವ ರೀತಿಯಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನನ್ನು ಕನ್ನಡಿಗರು ಹಾಗೂ ಸಾಹಿತ್ಯ ಆಸಕ್ತರ ನೆನಪಿನಲ್ಲಿ ಉಳಿಯುವಂತೆ ಆಯೋಜಿಸಲಾಗಿದ್ದು, ಕನ್ನಡಿಗರ ಬಗ್ಗೆ, ಭಾಷೆ ಹಾಗೂ ನಾಡಿನ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವವರಿಗೆ ಸರಿಯಾದ ಉತ್ತರ ನೀಡಲಾಗುವುದು ಎಂದರು.

ಇನ್ನು ಪೊಲೀಸ್, ಎನ್.ಸಿ.ಸಿ, ಸೇವದಾಳ, ಸ್ಕೌಟ್ ಮತ್ತು ಗೈಡ್ಸ್ ತಂಡಗಳು ಗೌರವ ವಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!