ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 32 ಪ್ರಯಾಣಿಕರಿಗೆ ಗಾಯ
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ ಹೊಡೆದು ಬಸ್‌ನಲ್ಲಿದ್ದ 32 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಕೆಆರ್‌ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿದ್ದು, ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ.




