ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯಿಂದ ವೈದ್ಯನಿಗೆ ಚಾಕುವಿನಿಂದ ಇರಿತ
ಮುಂಬೈ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ರೋಗಿಯೊಬ್ಬ ಚಿಕಿತ್ಸೆ ನೀಡಲು ಬಂದ ವೈದ್ಯರಿಗೆ ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಶ್ರೀ ವಸಂತರಾವ್ ನಾಯಕ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಹಲ್ಲೆ ನಡೆಸಿದ ವ್ಯಕ್ತಿ ಬುಧವಾರ ತನಗೆ ತಾನೇ ಚಾಕುವಿನಿಂದ ಇರಿದು ಆಸ್ಪತ್ರೆ ದಾಖಲಾಗಿದ್ದ.
ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ದಾಖಲಾಗಿದ್ದ ವ್ಯಕ್ತಿ ಗುರುವಾರ ರಾತ್ರಿ ತನ್ನನ್ನು ಪರೀಕ್ಷಿಸಲು ಬಂದಿದ್ದ ವೈದ್ಯನಿಗೆ ಚಾಕುವಿನಿಂದ ಇರಿದಿದ್ದಾನೆ. ಅವರನ್ನು ರಕ್ಷಿಸಲು ಮುಂದಾದ ಮತ್ತೊಬ್ಬ ವೈದ್ಯರ ಮೇಲೂ ರೋಗಿ ಹಲ್ಲೆ ನಡೆಸಿದ್ದಾನೆ.
ವರದಿಗಳ ಪ್ರಕಾರ, ಹಣ್ಣುಗಳನ್ನು ಕತ್ತರಿಸಲು ಪಕ್ಕದಲ್ಲಿಟ್ಟಿದ್ದ ಚಾಕುವಿನಿಂದ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಆತನನ್ನು ಪರೀಕ್ಷಿಸಲು ವೈದ್ಯರೊಬ್ಬರು ಬಂದಿದ್ದು, ಈ ವೇಳೆ ಹಣ್ಣು ತಿನ್ನಲು ಬಯಸುತ್ತೀರಾ? ಎಂದು ಕೇಳಿದ್ದಾರೆ. ಬಳಿಕ ತನಗೆ ತಾನೇ ಇರಿದುಕೊಂಡಿರುವ ಗಾಯವನ್ನು ಪರೀಕ್ಷಿಸಲು ವೈದ್ಯ ಮುಂದಾದಾಗ ಆತ ನಿರಾಕರಿಸಿದ್ದಾನೆ. ಬಳಿಕ ಆತ ಚಾಕುವಿನಿಂದ ವೈದ್ಯನಿಗೆ ಇರಿದಿದ್ದಾನೆ. ಇ




