March 26, 2026

ಮಂಗಳೂರು: ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಮೃತ್ಯು

0
image_editor_output_image82538691-1672985981569.jpg

ಮಂಗಳೂರು: ಬಸ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರಿನ ಸ್ಟೇಟ್‌ಬ್ಯಾಂಕ್‌ ಮೀನು ಮಾರ್ಕೆಟ್ ಎದುರು ನಿನ್ನೆ ನಡೆದಿದೆ. ಮೃತರನ್ನು ಬಸವರಾಜ್ (45) ಎನ್ನಲಾಗಿದೆ.

ಇವರು ಬೆಳಿಗ್ಗೆ 7.20ಕ್ಕೆ ಮೀನು ಮಾರ್ಕೆಟ್ ಎದುರು ರಸ್ತೆ ದಾಟುತ್ತಿದ್ದಾಗ ರಾವ್ ಆ್ಯಂಡ್ ರಾವ್ ಸರ್ಕಲ್ ಕಡೆಗೆ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು.

ಅಪಘಾತದಲ್ಲಿ ಬಸವರಾಜ್ ಅವರು ಸುಮಾರು 15 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ತೊಡೆ ಮತ್ತು ಸೊಂಟಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಂಗಳೂರು ಪಶ್ವಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!