August 13, 2026

ಶಿಕ್ಷಕಿಗೆ ಗುಂಡು ಹಾರಿಸಿದ 6 ವರ್ಷದ ಬಾಲಕ: ಶಿಕ್ಷಕಿ ಗಂಭೀರ

0
image_editor_output_image-52821241-1673063981148.jpg

ವಾಷಿಂಗ್ಟನ್: 6 ವರ್ಷದ ಬಾಲಕನೊಬ್ಬ ಶಿಕ್ಷಕಿಗೆ ಗುಂಡು ಹಾರಿಸಿದ ಘಟನೆ ಪೂರ್ವ ಅಮೆರಿಕದ ವರ್ಜೀನಿಯಾ ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ರಿಚ್ನೆಕ್ ಎಲಿಮೆಂಟರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ ಶಿಕ್ಷಕಿಗೆ ಗುಂಡು ತಗಲಿದ್ದು, ಶಿಕ್ಷಕಿಯ ಸ್ಥಿತಿ ಗಂಭೀರವಾಗಿದೆ. ಜೊತೆಗೆ ತರಗತಿಯಲ್ಲಿದ್ದ ಯಾವುದೇ ವಿದ್ಯಾರ್ಥಿಗಳಿಗೂ ತೊಂದರೆ ಆಗಿಲ್ಲ.

ಈ ಬಗ್ಗೆ ಪೊಲೀಸ್ ಅಧಿಕಾರಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಬಾಲಕನು ಆಕಸ್ಮಿಕವಾಗಿ ನಡೆಸಿದ ಗುಂಡಿನ ದಾಳಿಯಲ್ಲ ಎಂದು ತಿಳಿಸಿದರು.

ಶಾಲೆಯ ಪ್ರಾಂಶುಪಾಲರು ಮಾತನಾಡಿ, ವಿದ್ಯಾರ್ಥಿಗಳಿಗೆ ಬಂದೂಕುಗಳು ಲಭ್ಯವಾಗದಂತೆ ನೋಡಿಕೊಳ್ಳಲು ಪ್ರತಿಯೊಬ್ಬರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

You may have missed

error: Content is protected !!