February 3, 2026

ಕಾಂಗ್ರೆಸ್‌ ಗೆ ಈ ಬಾರಿ 80 ಸೀಟು ಬರೋದಿಲ್ಲ ಎಂದಿದ್ದ ಕೆಜಿಎಫ್ ಬಾಬು ಪಕ್ಷದಿಂದ ಅಮಾನತು

0
image_editor_output_image2147277321-1673065546233.jpg

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರನ್ನು ಕಾಂಗ್ರೆಸ್ ಪಕ್ಷವು ಅಮಾನತು ಮಾಡಿದೆ. ಪಕ್ಷ ವಿರೋಧಿ ಹೇಳಿಕೆ ನೀಡಿದ ಕಾರಣದಿಂದ ಶುಕ್ರವಾರ ಅಮಾನತು ಮಾಡಿದೆ.
ಶುಕ್ರವಾರ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ್ದ ಕೆಜಿಎಫ್ ಬಾಬು, ಕಾಂಗ್ರೆಸ್‌ ಗೆ ಈ ಬಾರಿ 80 ಸೀಟು ಬರೋದಿಲ್ಲ ಎಂದು ಹೇಳಿದ್ದರು.

ಇದಕ್ಕೆ ಕಾಂಗ್ರೆಸ್ ಮುಖಂಡ ಮನೋಹರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕಾಂಗ್ರೆಸ್‌ ಕಚೇರಿಯಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಕೆಜಿಎಫ್ ಬಾಬು ವಿರುದ್ಧ ಗಲಾಟೆ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!