ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರವನ್ನು ತಿರಸ್ಕರಿಸಿದ ಕೇಂದ್ರ ಸರಕಾರ
ಬೆಂಗಳೂರು: ಸತತ 13 ವರ್ಷಗಳಿಂದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಥಬ್ಧಚಿತ್ರದಲ್ಲಿ ಪ್ರದರ್ಶಿಸುತ್ತಿದ್ದ ಕರ್ನಾಟಕವು ಈ ಬಾರಿ ಅವಕಾಶವನ್ನು ಕಳೆದುಕೊಂಡಿದೆ.
ರಾಜ್ಯ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ.
ಇದರ ಪರಿಣಾಮವಾಗಿ ಜನವರಿ 26ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ದಿನದಂದು ಪರೇಡ್‍ನಲ್ಲಿ ಕರ್ನಾಟಕ 13 ವರ್ಷಗಳ ನಂತರ ಪ್ರತಿನಿಧಿಸುತ್ತಿಲ್ಲ ಎಂದು ತಿಳಿಸಿದರು.




