February 3, 2026

ಕಾಸರಗೋಡು: ಬಿರಿಯಾನಿ ಸೇವಿಸಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡು ಮೃತ್ಯು

0
image_editor_output_image954628163-1673083628759.jpg

ಕಾಸರಗೋಡು: ವಿಷಾಹಾರ ಸೇವನೆಯಿಂದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪೆರುಂಬಳ ಬೇನೂರಿನಲ್ಲಿ ನಡೆದಿದೆ.

ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( 19) ಮೃತಪಟ್ಟ ವಿದ್ಯಾರ್ಥಿನಿ . ಹೋಟೆಲ್ ನಿಂದ ತರಿಸಿದ್ದ ಆಹಾರ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಈಕೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.

ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ .ಕಾಂ ವಿದ್ಯಾರ್ಥಿನಿಯಾಗಿದ್ದಳು . ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥ ಗೊಂಡಿದ್ದರು ಕಾಸರಗೋಡಿನ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು .

ಹೊಸವರ್ಷದ ಹಿನ್ನಲೆಯಲ್ಲಿ ಹೋಟೆಲ್ ನಿಂದ ಆನ್ ಲೈನ್ ಮೂಲಕ ಆಹಾರ ಖರೀದಿಸಿ ಕುಟುಂಬದವರ ಜೊತೆ ಸೇವಿಸಿದ್ದು ಆಹಾರ ಸೇವಿಸಿದ್ದ ಎಲ್ಲರಲ್ಲಿ ಅಸ್ವಸ್ಥತೆ ಕಂಡುಬಂದಿತ್ತು . ಆದರೆ ಅಂಜುಶ್ರಿ ತೀವ್ರ ಅಸ್ವಸ್ಥತೆ ಗೊಂಡ ಹಿನ್ನಲೆಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು . ಆದರೆ ಸ್ಥಿತಿ ಗಂಭೀರವಾದುರಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!