March 26, 2026

ಬೆಳ್ತಂಗಡಿ : ಬಾಲಕಿ ಮೇಲೆ ಅತ್ಯಾಚಾರ, ಗರ್ಭಪಾತ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

0
IMG-20230108-WA0016.jpg

ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ ಮಾಡಿ ಗರ್ಭಪಾತ ಮಾಡಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ತಂಡ ಯಶಸ್ವಿಯಾಗಿದ್ದಾರೆ.

ಡಿ. 26ರಂದು ಬಾಲಕಿ ಮೇಲೆ ಆರೋಪಿ ಸುಧೀರ್ ಎಂಬ ಟಿವಿ ನೋಡಲು ಹೋದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು ನಂತರ ಬೆದರಿಕೆ ಹಾಕಿ ನಂತರ ಕೂಡ ಅತ್ಯಾಚಾರ ಮಾಡುತ್ತಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿದ್ದು ಇದಕ್ಕೆ ಹಲವು ಮಂದಿ ಸಾಥ್ ನೀಡಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಸೇರಿದಂತರ ಹಲವು ಸೆಕ್ಷನ್ ಅಡಿಯಲ್ಲಿ ಜ.0್2ರಂದು ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ಮೂರನೇ ಆರೋಪಿ ಮನೋಹರ(23) ಮತ್ತು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ನಾಲ್ಕನೇ ಆರೋಪಿ ಮಾಧವ ಯಾನೆ ಮಾಧು(30) ಎಂಬಾತನನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಮತ್ತು ಸಬ್ ಇನ್ಸ್ಪೆಕ್ಟರ್ ಅರ್ಜುನ್ ತಂಡದ ಸಿಬ್ಬಂದಿಗಳಾದ ವಿಜಯ ಕುಮರ್ ರೈ, ವಿಶ್ವನಾಥ್, ಇಬ್ರಾಹಿಂ , ಚರಣ್ ರಾಜ್, ಗಂಗಾಧರ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು ಇಬ್ಬರನ್ನು ಬೆಳ್ತಂಗಡಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಇನ್ನೂ ಈ ಪ್ರಕರಣದಲ್ಲಿ ಹಲವು ಮಂದಿ ಭಾಗಿಯಾಗಿದ್ದು ಘಟನೆ ಬಳಿಕ ಪರಾರಿಯಾಗಿದ್ದು ಅವರ ಬಂಧನಕ್ಕಾಗಿ ಬೆಳ್ತಂಗಡಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!